ಮತದಾರರ ಮಾಹಿತಿ ಕದ್ದ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರಕಾರಕ್ಕೆ ತಲೆನೋವು ತಂದಿಟ್ಟ ಮತದಾರರ ಮಾಹಿತಿ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ರೇಣುಕಾಪ್ರಸಾದ್, ಧರ್ಮೇಶ್ ಸೇರಿದಂತೆ ನಾಲ್ವರನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ವೋಟರ್ ಐಡಿ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ನಿನ್ನೆ ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಹಲಸೂರು ಗೇಟ್ ಠಾಣೆಯಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ . ಚಿಲುಮೆ ಸಂಸ್ಥೆಗೆ ಜಾಗೃತಿ ಮೂಡಿಸೋದಕ್ಕೆ ಅಷ್ಟೇ ನಾವು ಅನುಮತಿ ಕೊಟ್ಟಿದ್ದೇವೆ. ಡೇಟಾ ಕಲೆಕ್ಟ್ ಮಾಡಿ ಅಂತಾ ಅನುಮತಿ ಕೊಟ್ಟಿರಲಿಲ್ಲ. ಆದರೆ ಡೇಟಾ ಕಲೆಕ್ಟ್ ಮಾಡ್ತಾ ಇದ್ದಾರೆ ಅಂತಾ ದೂರು ದಾಖಲಾಗಿತ್ತು ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!