ಮತದಾರರ ಪಟ್ಟಿ ವಿವಾದ: ಕೆಜಿಎಫ್ ಕಥೆಯೂ ಅಲ್ಲ, ಕಾಂತಾರ ದಂತಕಥೆಯೂ ಅಲ್ಲ ಎಂದ ಸಿದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಗದ್ದಲ ಶುರುವಾಗಿದ್ದು,ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಹೆಸರಿನಲ್ಲಿ ಮತದಾರರ ಖಾಸಗಿ ಸಂಗತಿಗಳು ಸೋರಿಕೆ ಆಗಿವೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಇತ್ತ ಸಚಿವ ಅಶ್ವತ್ಥ್ ನಾರಾಯಣ್ ಅವರ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸಿದ್ದು, ಅದಕ್ಕೆ ಕಾರಣ ಹೊಂಬಾಳೆ ಹೆಸರು.
ಹೊಂಬಾಳೆ ಫಿಲ್ಮಸ್ ಸಂಸ್ಥೆಯು ಅಶ್ವತ್ಥ್ ನಾರಾಯಣ್ ಅವರ ಸಂಬಂಧಿ ವಿಜಯ್ ಕುಮಾರ್ ಅವರದ್ದು. ಈ ಹೊಂಬಾಳೆ ಫಿಲ್ಮಸ್ ಬ್ಯಾನರ್ ನಲ್ಲಿ ಕೆಜಿಎಫ್, ಕಾಂತಾರ ಸೇರಿದಂತೆ ಹಲವು ಚಿತ್ರಗಳು ನಿರ್ಮಾಣಗೊಂಡಿವೆ.

ಮತದಾರರ ಪಟ್ಟಿಯ ದುರುಪಯೋಗಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಹೆಸರು ಬಲವಾಗಿ ಕೇಳಿಬಂದಿದೆ. ಹೀಗಾಗಿ ಚಿಲುಮೆ ಎನ್ನುವ ಹೆಸರಿನ ಸಂಸ್ಥೆಯ ಜೊತೆ ತಳುಕುಹಾಕಿಕೊಂಡಿದೆ.

ಹೊಂಬಾಳೆ ಹೆಸರು ಕೇಳಿ ಬರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೊಂಬಾಳೆ ಫಿಲ್ಮಸ್ ಸಂಸ್ಥೆಯನ್ನು ತಿವಿಯಲು ಈ ಬ್ಯಾನರ್ ನಿಂದ ನಿರ್ಮಾಣವಾದ ಎರಡು ಚಿತ್ರಗಳ ಹೆಸರನ್ನು ಉಪಯೋಗಿಸಿಕೊಂಡು, ಹೊಂಬಾಳೆ ಫಿಲ್ಮ್ಸ್ ನ ಅಶ್ವತ್ಥ್ ನಾರಾಯಣ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಸರಣಿಯ ಟ್ವಿಟ್ ಮಾಡಿರುವ ಸಿದ್ಧರಾಮಯ್ಯ, ‘ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ, ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ ಅದನ್ನೇ ಮಾಡಬೇಕು’ ಎಂದು ಟ್ವಿಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!