ಹೊಸದಿಗಂತ ಡಿಜಿಟಲ್ ಡೆಸ್ಕ್:
ನವದೆಹಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ವಂಚನೆ ನಡೆದಿರುವ ಕುರಿತು ಇಂದು ನಡೆಯಲಿರುವ ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರೊಂದಿಗೆ ಪ್ರಸ್ತಾಪಿಸುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
“ಇಂದು ಮಧ್ಯಾಹ್ನ ನಾವು ಮುಖ್ಯ ಚುನಾವಣಾ ಆಯುಕ್ತರೊಂದಿಗೆ ಸಭೆ ನಡೆಸುತ್ತೇವೆ. ಈ ಸಭೆಯಲ್ಲಿ ನಾವು ಈ ಎಲ್ಲಾ ವಿಷಯಗಳನ್ನು ಪ್ರಸ್ತಾಪಿಸುತ್ತೇವೆ” ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ಅವರು ಕೇಜ್ರಿವಾಲ್ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.