ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ನಾಳೆ ಚುನಾವಣಾ ಆಯೋಗದ ಭೇಟಿ ಎಂದ ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ದಲ್ಲಿ ಕಾಂಗ್ರೆಸ್ ರಾಜ್ಯ ಸರಕಾರದ ವಿರುದ್ಧ ತಿರುಗಿಬಿದಿದ್ದು, ನಾಳೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆ, ಮತದಾರರ ಮಾಹಿತಿ ಸಂಗ್ರಹ ಗಂಭೀರ ಅಪರಾಧ.ಚುನಾವಣಾ ಆಯೋಗವು ಈ ಪ್ರಕರಣವನ್ನು ಡಿವಿಸಿಗೆ ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ಮಧ್ಯಾಹ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾನು , ಸಿದ್ದರಾಮಯ್ಯಅವರು ಹಾಗೂ ಪಕ್ಷದ ಇತರೆ ನಾಯಕರು ಭೇಟಿ ಮಾಡಲಿದ್ದೇವೆ ಎಂದು ಹೇಳಿದರು.

ಇಂದು ಪೊಲೀಸರು ಚಿಲುಮೆ ಸಂಸ್ಥೆ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಹಾಗೂ ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!