ಮತದಾರರ ಪಟ್ಟಿ ಪರಿಷ್ಕರಣೆ: ಪೌರತ್ವದ ವಿಷಯ ಚುನಾವಣಾ ಆಯೋಗದ ಕಾರ್ಯವ್ಯಾಪ್ತಿಯಲ್ಲ ಎಂದ ಸುಪ್ರೀಂ ಕೋರ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ವಿಧಾನಸಭೆ ಚುನಾವಣೆ ಮುನ್ನ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಾರಂಭಿಸಿದೆ.

ಮತದಾರ ಪಟ್ಟಿಗಳ ವಿಶೇಷ ಪರಿಷ್ಕರಣೆಯ ಸಮಯದಲ್ಲಿ ನೀವು ಪೌರತ್ವದ ವಿಷಯವನ್ನು ಏಕೆ ತೆಗೆದುಕೊಂಡಿದ್ದೀರಿ, ಅದು ಗೃಹ ಸಚಿವಾಲಯದ ಅಡಿಯಲ್ಲಿ ಬರುತ್ತದೆಯೇ ಹೊರತು ಚುನಾವಣಾ ಆಯೋಗದ ಅಡಿಯಲ್ಲ ಎಂದು ಹೇಳಿದೆ.

ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ವೀಕೃತ ದಾಖಲೆಗಳ ಪಟ್ಟಿಯಿಂದ ಆಧಾರ್ ಕಾರ್ಡ್‌ಗಳನ್ನು ಹೊರಗಿಡುವ ಬಗ್ಗೆ ಕೂಡ ಸುಪ್ರೀಂ ಕೋರ್ಟ್ ಪೀಠ ಕಳವಳ ವ್ಯಕ್ತಪಡಿಸಿದೆ. ದೇಶದ ನಾಗರಿಕರ ಗುರುತಿನ ಪುರಾವೆಯಾಗಿ ಆಧಾರ್ ನ್ನು ದೇಶಾದ್ಯಂತ ಬಳಸಲಾಗುತ್ತಿರುವುದರಿಂದ ಅದನ್ನು ಏಕೆ ಪರಿಗಣಿಸಲಾಗಿಲ್ಲ ಎಂಬುದರ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಈ ಪ್ರಕ್ರಿಯೆಯನ್ನು ಪ್ರಶ್ನಿಸುವ ಅರ್ಜಿಗಳಿಗೆ ಪ್ರಾಥಮಿಕ ಆಕ್ಷೇಪಣೆಗಳಿವೆ, ಪರಿಷ್ಕರಣೆಯನ್ನು ಸಂವಿಧಾನಕ್ಕೆ ಅನುಗುಣವಾಗಿ ನಡೆಸಲಾಗುತ್ತಿದೆ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮುಂದೆ ಪ್ರತಿಪಾದಿಸಿದೆ.ಕೊನೆಯ ಬಾರಿಗೆ ಇಂತಹ ಸಮಗ್ರ ಪರಿಷ್ಕರಣೆ ನಡೆಸಿದ್ದು, 2003 ರಲ್ಲಿ. ಪ್ರಸ್ತುತ ನವೀಕರಣವು ಸಕಾಲಿಕ ಮತ್ತು ಅಗತ್ಯವಾಗಿದೆ ಎಂದು ಚುನಾವಣಾ ಆಯೋಗ ಒತ್ತಿ ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!