ಹೊಸ ಮುಖಗಳ ಕೈ ಹಿಡಿದ ಮತದಾರರು: ಉಡುಪಿ ಜಿಲ್ಲೆಯಲ್ಲಿ ಬಿಜೆಪಿಗೆ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉಡುಪಿ ಜಿಲ್ಲೆಯಲ್ಲಿ ಹಾಲಿ ಐವರ ಪೈಕಿ ಕಾರ್ಕಳದ ಸುನೀಲ್ ಕುಮಾರ್ ಹೊರತುಪಡಿಸಿ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿಗೆ ಗೆಲುವಿನ ಉಡುಗರೆಯನ್ನು ಮತದಾರರು ನೀಡಿದ್ದಾರೆ.

ಕಾರ್ಕಳದಲ್ಲಿ ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ಅವರು ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರಿಗೆ ಟಫ್ ಫೈಟ್ ಕೊಟ್ಟ ಕಾರಣ ತ್ರಾಸದಾಯಕ ಜಯ ದೊರಕಿದೆ.

ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದು ಬೀಗಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ ಅವರು ದಿನೇಶ್ ಹೆಗ್ಡೆ ಮೊಳಹಳ್ಳಿ ಸೋಲಿನ ರುಚಿ ತೋರಿಸಿದ್ದಾರೆ.

ಬೈಂದೂರು ಕ್ಷೇತ್ರದಲ್ಲಿ ಗುರುರಾಜ ಶೆಟ್ಟಿ ಗಂಟಿಹೊಳಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿಯವರಿಗೆ ಸೋಲಾಗಿದೆ.

ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ವಿರುದ್ದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಜಯ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!