ತ್ರಿಪುರಾ ವಿಧಾನಸಭೆ ಚುನಾವಣೆ: ಮಧ್ಯಾಹ್ನ 1ಗಂಟೆವರೆಗೆ ಶೇ.51.35ರಷ್ಟು ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತ್ರಿಪುರಾ ವಿಧಾನಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮಧ್ಯಾಹ್ನ 1ರವರೆಗೆ ರಾಜ್ಯದೆಲ್ಲೆಡೆ ಶೇ.51.35ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿದೆ. ಬೆಳಗ್ಗೆಯಿಂದ ಮತಗಟ್ಟೆಗಳ ಮುಂದೆ ಜನ ಓಟ್‌ ಹಾಕಲು ಕ್ಯೂ ಕಟ್ಟಿ ನಿಂತಿದ್ದಾರೆ. 2018ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೇ.91.38ರಷ್ಟು ಮತದಾನವಾಗಿದೆ.ಇವತ್ತಿನ ಮತದಾನ ಆ ದಾಖಲೆಯನ್ನು ಮೀರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ತ್ರಿಪುರಾದಾದ್ಯಂತ 3,337 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮತದಾನದ ವೇಳೆ ಈಗಾಗಲೇ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!