ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯ ಚುನಾವಣೆ ಬಳಿಕ ಸೋಮವಾರ ಚುನಾವಣೋತ್ತರ ಸಮೀಕ್ಷೆ ನಡೆದಿದ್ದು, ಸೋಮವಾರ 40 ಸದಸ್ಯ ಬಲ ಹೊಂದಿರುವ ಗೋವಾದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆಗಳು ದಿಟ್ಟವಾಗಿದ.
ಹಾಗಾಗಿ ಚುನಾವಣೋತ್ತರ ಫಲಿತಾಂಶ ಪ್ರಕಟವಾದ ಬಳಿಕ ರಾಜಕೀಯ ಪಕ್ಷಗಳ ಲೆಕ್ಕಾಚಾರ ಬದಲಾಗಿದೆ. ಕಾಂಗ್ರೆಸ್ ಪಕ್ಷ 2017ರ ತಪ್ಪು ಮರುಕಳಿಸಬಾರದು ಎಂಬ ದೃಢ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಬೇರೆ ಪಕ್ಷಗಳು ತಮ್ಮ ಶಾಸಕರನ್ನುಸೆಳೆಯದಂತೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಉತ್ತರ ಗೋವಾದಲ್ಲಿರುವ ರೆಸಾರ್ಟ್‌ವೊಂದಕ್ಕೆ ಕರೆದುಕೊಂಡು ಹೋಗಿದೆ.
ಮಾರ್ಚ್ ೧೦ ಮತ ಎಣಿಕೆ ಪೂರ್ಣಗೊಳ್ಳುವ ತನಕ ಕಾಂಗ್ರೆಸ್ ಅಭ್ಯರ್ಥಿಗಳು ರೆಸಾರ್ಟ್‌ನಲ್ಲಿಯೇ ಉಳಿದುಕೊಳ್ಳಲಿದ್ದಾರೆ.
ಎಐಸಿಸಿ ಗೋವಾ ಚುನಾವಣಾ ಉಸ್ತುವಾರಿ ದಿನೇಶ್ ಗುಂಡೂರಾವ್ ಈ ಕುರಿತು ಮಾತನಾಡಿದ್ದು, ನಾವು ಎಲ್ಲಾ ಅಭ್ಯರ್ಥಿಗಳು ಒಟ್ಟಿಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿಕೆಶಿಗೆ ಹೈಕಮಾಂಡ್ ಟಾಸ್ಕ್ ನೀಡಿದ್ದು, ಗೋವಾ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದರೆ ಚಿಕ್ಕಪುಟ್ಟ ಪಕ್ಷಗಳ ಜೊತೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ.
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಟಿಎಂಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಒಂದು ವೇಳೆ ಅತಂತ್ರ ವಿಧಾನಸಭೆ ರಚನೆಯಾದರೆ ಟಿಎಂಸಿ ಜೊತೆಗೂ ಕಾಂಗ್ರೆಸ್ ಮಾತುಕತೆ ನಡೆಸುವ ನಿರೀಕ್ಷೆ ಇದೆ.