ಹೊಸದಿಗಂತ ಡಿಜಿಟಲ್ ಡೆಸ್ಕ್:
18ನೇ ಲೋಕಸಭೆಯ ಸ್ಪೀಕರ್ ಸ್ಥಾನದ ಚುನಾವಣೆ ಕಂಪ್ಲೀಟ್ ಆಗಿದ್ದು, ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ I.N.D.I.A ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಗಿದ್ದು, I.N.D.I.A ಬಣದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್‌ರನ್ನು ಮಣಿಸಿ ಓಂ ಬಿರ್ಲಾ ಗೆಲುವು ಸಾಧಿಸಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.