ಮತದಾನ ಮುಕ್ತಾಯ: ಮತದಾರರಿಗೆ ಧನ್ಯವಾದ ಹೇಳಿದ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬುಧವಾರ ಸಂಜೆ ಮತದಾನ ಮುಕ್ತಾಯವಾಗಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

‘ಉತ್ತಮವಾದ, ಘನತೆ ಮತ್ತು ಜನಪರ ಪ್ರಚಾರ’ ಮಾಡಿದ್ದಕ್ಕಾಗಿ ಪಕ್ಷದ ನಾಯಕರನ್ನೂ ಶ್ಲಾಘಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ‘ನಾನು ಕಾರ್ಯಕರ್ತರಿಗೆ ಮತ್ತು ಉತ್ತಮವಾದ, ಘನತೆ ಮತ್ತು ಜನಾಧಾರಿತ ಪ್ರಚಾರ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಪ್ರಗತಿಪರ ಭವಿಷ್ಯಕ್ಕಾಗಿ ಮತ ಹಾಕಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!