Saturday, March 25, 2023

Latest Posts

ವಯಸ್ಸಾದವರು, ವಿಕಲಾಂಗರಿಗೆ ಮನೆಯಿಂದಲೇ ಮತದಾನ ಸೌಲಭ್ಯ-ಕರ್ನಾಟಕದಲ್ಲಿ ಮೊದಲ ಬಾರಿ ಪ್ರಯೋಗ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇದೇ ಮೊದಲ ಬಾರಿಗೆ ವಯಸ್ಸಾದವರು, ವಿಕಲಾಂಗರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ.

80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದ ಮತದಾನ ಮಾಡಲು ಬಯಸಿದರೆ ಅವರಿಗೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಕಳೆದ ಮೂರು ದಿನಗಳಿಂದ ರಾಜಕೀಯ ಪಕ್ಷಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಕಲ ಸಿದ್ಧತೆ ಮಾಡಲಾಗಿದೆ ಎಂದಿದ್ದಾರೆ.

ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ 80 ವರ್ಚ ಮೇಲ್ಪಟ್ಟವರಿಗೆ ಹಾಗೂ ವಿಶೇಷ ಮತದಾರರು ಬಯಸಿದಲ್ಲಿ ಅವರು ಮನೆಯಿಂದಲೇ ಮತದಾನ ಮಾಡಬಹುದು, ಅದಕ್ಕೆ ಬೇಕಾದ ಸೌಲಭ್ಯ ಒದಗಿಸಲಾಗುವುದು. ಅಧಿಸೂಚನೆ ಹೊರಡಿಸಿದ ಐದು ದಿನಗಳೊಳಗೆ ಫಾರ್ಮ್ 12 ಡಿ ಲಭ್ಯವಿರುತ್ತದೆ. ಇದರಿಂದ ತಮ್ಮ ಹಕ್ಕು ಚಲಾಯಿಸಬಹುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!