ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ನಾಲ್ಕು ಸ್ಥಾನದಲ್ಲಿ 43 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪದವೀಧರರ ಕ್ಷೇತ್ರದ ಎರಡು ಸ್ಥಾನಗಳು ಮತ್ತು ಶಿಕ್ಷಕರ ಕ್ಷೇತ್ರದ ಎರಡು ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತ ಹಾಕಲಿದ್ದಾರೆ.
ಬರೀ ನಾಲ್ಕು ಸ್ಥಾನಕ್ಕೆ 43 ಅಭ್ಯರ್ಥಿಗಳು ಕಣದಲ್ಲಿರುವ ಕಾರಣ ಸ್ಪರ್ಧೆ ತೀವ್ರವಾಗಿದೆ. ಈ ಸ್ಥಾನವನ್ನು ಯಾರು ಗೆಲ್ಲಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ.
ಬೆಳಗ್ಗೆ ಎಂಟು ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಸಂಜೆ ನಾಲ್ಕುಗಂಟೆಯವರೆಗೂ ಮತ ಚಲಾವಣೆಗೆ ಅವಕಾಶ ಇದೆ. ಶಾಂತಿಯುತ ಮತ್ತು ನ್ಯಾಯಸಮ್ಮತ ಮತದಾನವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.



