ನಾಳೆ ಗುಜರಾತ್‌ ಚುನಾವಣೆಯ ಮೊದಲ ಹಂತದ ಮತದಾನ: ಎಲ್ಲೆಡೆ ಬಿಗಿ ಬಂದೋಬಸ್ತ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶವನ್ನೇ ತನ್ನತ ಸೆಳೆದ ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ (ಡಿಸೆಂಬರ್‌ ೧) ನಡೆಯಲಿದೆ.

ಬಿಜೆಪಿ, ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷವು ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸಿದೆ.

ಮೊದಲ ಹಂತದಲ್ಲಿ ಗುಜರಾತ್‌ನ 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಗುಜರಾತ್‌ ಹಾಗೂ ಕಛ್-ಸೌರಾಷ್ಟ್ರ ಪ್ರದೇಶದ 19 ಜಿಲ್ಲೆಗಳಲ್ಲಿ ಮತದಾನ ನಡೆಯಲಿದ್ದು, 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

89 ಕ್ಷೇತ್ರಗಳಲ್ಲಿ 14 ಕ್ಷೇತ್ರಗಳು ಎಸ್‌ಟಿಗೆ ಹಾಗೂ 7 ಕ್ಷೇತ್ರ ದಲಿತರಿಗೆ ಮೀಸಲಾಗಿವೆ. ಮೊದಲ ಹಂತದಲ್ಲಿ ಸುಮಾರು 2.39 ಕೋಟಿ ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ. ಬೆಳಗ್ಗೆ 8 ರಿಂದ ಸಂಜೆ 5.30 ರವರೆಗೆ ಮತದಾನ ನಡೆಯಲಿದ್ದು, ಪ್ರತಿಯೊಂದು ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!