Voting Poll |ಯಾವ ಜಿಲ್ಲೆಯಲ್ಲಿ ಎಷ್ಟಾಯ್ತು ಮತದಾನ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳು ಸೇರಿದಂತೆ ದೇಶಾದ್ಯಂತ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು. ಎರಡನೇ ಹಂತದಲ್ಲಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಹಾಗಿದ್ರೆ ಬನ್ನಿ ನೋಡೋಣ ಯಾವ ಜೆಲ್ಲೆಯಲ್ಲಿ ಎಷ್ಟು ಮತದಾನ ನಡೆದಿದೆ ಅಂತ:

ಮಂಡ್ಯ ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇ.7.70ರಷ್ಟು ಮತದಾನವಾಗಿದೆ.

ಹಾಸನದಲ್ಲಿ ಬೆಳಗ್ಗೆ 7 ರಿಂದ 9 ಗಂಟೆವರೆಗೆ ಶೇಕಡಾ 8.2ರಷ್ಟು ಮತದಾನವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ 8.70 ರಷ್ಟು ಮತದಾನವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ 12.75ರಷ್ಟು ಮತದಾನ‌ವಾಗಿದೆ.

ಸದ್ಯದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ನಡೆದಿದೆ. ಹೆಚ್ಚಿನ ಅಪ್ಡೇಟ್ ನಿರೀಕ್ಷಿಸಲಾಗಿದೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!