ರಕ್ಷಣಾ ಕಾರ್ಯ, ಪರಿಹಾರಕ್ಕೆ ಹಣದ ಕೊರತೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರಿ ಮಳೆಯಿಂದ ಸಂಕಷ್ಟಕ್ಕೆ ಈಡಾಗಿರುವವರ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ಈಗಾಗಲೇ ನಮ್ಮ ಬಳಿ ರಾಷ್ಟ್ರೀಯ ವಿಪತ್ತು ನಿರ್ವಹಣೆಗಾಗಿ 750 ಕೋಟಿ ರೂಪಾಯಿ ಹಣ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಉಳ್ಳಾದ ಸಮುದ್ರ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಅಲ್ಲಿನ ನೆರೆ ಪ್ರದೇಶಗಳನ್ನು ವೀಕ್ಷಿಸಿದರು.
ಅತಿವೃಷ್ಠಿಯಿಂದ ಹಾನಿಗೊಳಗಾಗಿರುವವರ ರಕ್ಷಣಾ ಕಾರ್ಯಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳ‌ ಬಳಿ ಹಣ ಇದೆ. ಯಾವುದೇ ಕೊರತೆ ಆಗದ ರೀತಿಯಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!