ನಕಲಿ ಅಂಕಪಟ್ಟಿ: 51 ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ವಿಟಿಯು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಕಲಿ ಅಂಕಪಟ್ಟಿಗಳ ಕಾರಣ ನೀಡಿ 51 ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಾತಿಯನ್ನು ನಿರಾಕರಿಸಿದೆ.

ಮೊದಲ ವರ್ಷದ ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳಿಗೆ ಈ ಪ್ರವೇಶ ಬಯಸಿ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದರು. ಆದರೆ ಎನ್‌ಐಒಎಸ್‌ ನೀಡಿದ ಪ್ರಮಾಣಪತ್ರಗಳು ನಕಲಿ ಎಂದು ಸಾಬೀತಾದ ಕಾರಣ, ಪ್ರವೇಶ ಪಡೆಯಲು ಅವಕಾಶ ನೀಡಿಲ್ಲ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಎಲ್ಲ ಅಂಕಪಟ್ಟಿಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆ ಮಾನ್ಯ ಮಾಡಿದೆ. ಆದರೆ ಕಾಲೇಜುವಾರು ಅನುಮೋದನೆ ‌ನೀಡುವಾಗ ವಿಟಿಯು ಅಮಾನ್ಯ ಮಾಡಿದೆ.

ನಕಲಿ ಅಂಕಪಟ್ಟಿಗಳ ಹಿಂದೆ ದೊಡ್ಡ ಹಗರಣ ನಡೆದಿರುವ ಬಗ್ಗೆ ವಿಟಿಯು ಶಂಕೆ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರ ಮತ್ತು ಎನ್ಐಓಎಸ್‌ಗೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಕ್ರಮವೆಸಗಿದ ವಿದ್ಯಾರ್ಥಿಗಳು ಮ್ಯಾನೇಜ್‌ಮೆಂಟ್‌ ‌ಕೋಟಾದಡಿ ಬೆಂಗಳೂರಿನ ಪ್ರತಿಷ್ಠಿತ ‌ಇಂಜಿನಿಯರಿಂಗ್‌ ಕಾಲೇಜಿಗೆ ಪ್ರವೇಶ ಪಡೆದಿದ್ದರು. ವಿದ್ಯಾರ್ಥಿಗಳು ತುಮಕೂರು, ಚಿಕ್ಕಬಳ್ಳಾಪುರ ಮೂಲದವರೆಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!