ಬೀದಿ ನಾಯಿಗಳ ದಾಳಿ- ವಾಘ್ ಬಕ್ರಿ ಚಹಾ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಾಘ್ ಬಕ್ರಿ ಟೀ ಗ್ರೂಪ್‌ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ (ಕಾರ್ಯನಿರ್ವಾಹಕ ನಿರ್ದೇಶಕ) ಪರಾಗ್ ದೇಸಾಯಿ (49) ನಿಧನರಾಗಿದ್ದಾರೆ.

ವಾಘ್ ಬಕ್ರಿ ಟೀ ಗ್ರೂಪ್‌ನ ನಿರ್ದೇಶಕ, ಉನ್ನತ ಕಾರ್ಯನಿರ್ವಾಹಕ ಪರಾಗ್‌ ಅವರು ಅಹ್ಮದಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದ್ದು, ಪರಾಗ್‌ ಅವರು ಬೀದಿ ನಾಯಿಗಳ ದಾಳಿಯಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವರದಿಯ ಪ್ರಕಾರ, ದೇಸಾಯಿ ಅವರು ಅ.15ರಂದು ತಮ್ಮ ಮನೆಯ ಮುಂದೆ ನಡೆದಾಡುವ ವೇಳೆ ಬೀದಿ ನಾಯಿಗಳಿಂದ ತೀವ್ರ ದಾಳಿಗೊಳಗಾಗಿದ್ದರು. ಈ ವೇಳೆ ಅವರು ನೆಲದ ಮೇಲೆ ಬಿದ್ದು, ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಶೆಲ್ಬಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೆಲ್ಬಿ ಆಸ್ಪತ್ರೆಯಲ್ಲಿ ಒಂದು ದಿನದ ನಿಗಾ ನಂತರ, ದೇಸಾಯಿ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಝೈಡಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ವೇಳೆ ತೀವ್ರ ಮಿದುಳು ರಕ್ತಸ್ರಾವದಿಂದಾಗಿ ಅವರು ಮೃತಪಟ್ಟಿದ್ದಾರೆ.

ಪರಾಗ್‌ ದೇಸಾಯಿ ಅವರು ಪತ್ನಿ ವಿದಿಶಾ ಮತ್ತು ಪುತ್ರಿ ಪರಿಶಾ ಅವರನ್ನು ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!