ಇನ್ನು ಎಂಟೇ ಎಂಟು ದಿನ ವೇಟ್‌ ಮಾಡಿ, ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ: ಲಕ್ಷ್ಮೀ ಹೆಬ್ಬಾಳ್ಕರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇನ್ನು ಎಂಟೇ ಎಂಟು ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!