ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ ಪೊಲೀಸರು ಇಂದು 4,800 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಕೊಲೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ ನಂತರ, ಪೊಲೀಸರು ದೋಷಾರೋಪಣೆಗಳನ್ನು ಸಿದ್ಧಪಡಿಸಿದರು, ಅದರ ಪ್ರತಿಗಳನ್ನು ಕಮಿಷನರ್ ಅವರೇ ಪ್ರಮಾಣೀಕರಿಸಿದರು. ಎಫ್‌ಎಸ್‌ಎಲ್ ವರದಿ ಸೇರಿದಂತೆ ಎಲ್ಲ ಸಾಕ್ಷ್ಯಗಳು ಕೊಲೆಯತ್ತ ಬೊಟ್ಟು ಮಾಡುತ್ತಿವೆ. 4,800 ಪುಟಗಳ ಚಾರ್ಜ್‌ಶೀಟ್ ಅನ್ನು ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ರೇಣುಕಾಸ್ವಾಮಿ ಹತ್ಯೆಯನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಿದ್ಧಪಡಿಸಲಾಗಿತ್ತು. ದೊಡ್ಡ ಬಾಕ್ಸ್ ನಲ್ಲಿ ಚಾರ್ಜ್ ಶೀಟ್ ತೆಗೆದುಕೊಂಡ ಹೋದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಎಸಿಪಿ ಚಂದನ್ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.