ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಡಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು

ಹೊಸದಿಗಂತ ಮಾಣಿ 

ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಗ್ಗಿನ ಕಾರೊಂದು ಡಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ.

ಜಾವ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದ ಕಾರಣ ತಡೆಬೇಲಿ ಮತ್ತು ಕಾರು ನಜ್ಜುಗುಜ್ಜಾಗಿದೆ. ಈ ತಡೆಬೇಲಿ ಪರ್ಮನೆಂಟ್ ಆಗಿದ್ದು, ಇದರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಅಷ್ಟೇ, ನಿರ್ಮಾಣ ಕಾರ್ಯ ನೋಡಿಯೇ ಸಾರ್ವಜನಿಕರು ಇದು ಉಳಿಯಬಹುದಾ ಇದನ್ನು ವೇಗವಾಗಿ ಬರುವ ಗಾಡಿಗಳು ಸೀಳಿಕೊಂಡು ಹೋಗಬಹುದು ಎಂದು ಮಾತಾಡಿಕೊಂಡಿದ್ದರು.

ಅದರಂತೆ ಇಂದು ಬೆಳಗ್ಗಿನ ಜಾವ ಘಟನೆ ನಡೆದಿದ್ದು ಉತ್ತಮ ಗುಣಮಟ್ಟದ ಕಾಂಕ್ರೀಟ್ ಬೇಲಿ ನಿರ್ಮಿಸಬಹುದಿತ್ತು ಎಂಬುದು ಸಾರ್ವಜನಿಕರ ಅಭಿಪ್ರಾಯ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!