Friday, February 3, 2023

Latest Posts

ಕಾವೇರುತ್ತಿದೆ ಚುನಾವಣಾ ಅಖಾಡ: ಕೋಟೆನಾಡಿಗೆ ಇಂದು ಬಿಜೆಪಿ ಅಧ್ಯಕ್ಷ ನಡ್ಡಾ ಎಂಟ್ರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದಲ್ಲಿ‌ ವಿಧಾನಸಭಾ ಚುನಾವಣೆ ಕಾವೇರುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಅಂಗಳದಲ್ಲಿ ಮಿಂಚಿನ ಸಂಚಲನ ಕಂಡುಬರುತ್ತಿದ್ದು, ಸಕಲ ಸಿದ್ಧತೆಗಳತ್ತ ಪಕ್ಷ ಮುಖಂಡರು ಚಿತ್ತ ನೆಟ್ಟಿದ್ದಾರೆ.

ಬಿಜೆಪಿಯೂ ಚುನಾವಣೆಗೆ ಭತದ ಸಿದ್ಧತೆ ನಡೆಸುತ್ತಿದ್ದು, ಇದರ ಭಾಗವಾಗಿ ಇಂದು ಕೋಟೆನಾಡು ಚಿತ್ರದುರ್ಗಕ್ಕೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆಗಮಿಸುತ್ತಿದ್ದಾರೆ.

ರಾಜ್ಯ ಪ್ರವಾಸದಲ್ಲಿ ಗುರುವಾರ ಚಿತ್ರದುರ್ಗದ ವಿವಿಧ ಮಠಗಳಿಗೆ ಭೇಟಿ ನೀಡಲಿರುವ ಅವರು ಎಸ್ಸಿ, ಎಸ್ಟಿ, ಓಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಗೃಹಸಚಿವ ಅಮಿತ್ ಶಾ ಭೇಟಿಯ ಬೆನ್ನಲ್ಲೇ ನಡ್ಡಾ ಭೇಟಿ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!