spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊನೆಗೂ ಮೌನ ಮುರಿದ ಸಿಎಂ: ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವೆ ಎಂದ ಬಿಎಸ್ ವೈ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಹೈಕಮಾಂಡ್‌ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ, ರಾಜ್ಯದಲ್ಲಿ ಪಕ್ಷವನ್ನು ಬೆಳೆಸುವುದು ಮತ್ತು ಅಧಿಕಾರಕ್ಕೆ ತರುವುದು ನನ್ನ ಉದ್ದೇಶ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇಂದು  ಸುದ್ದಿಗೋಷ್ಠಿ ನಡೆಸಿದ ಸಿಎಂ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಅವರು ನನ್ನ ಮೇಲೆ ವಿಶೇಷವಾದ ಪ್ರೀತಿ ಮತ್ತು ವಿಶ್ವಾಸ ಇಟ್ಟುಕೊಂಡಿದ್ದಾರೆ. ಪಕ್ಷದ ಆಂತರಿಕ ನಿಯಮ ಪ್ರಕಾರ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ನೀಡುವುದಿಲ್ಲ. ಆದರೆ ನನ್ನ ಕಾರ್ಯವೈಖರಿಯನ್ನು ಮೆಚ್ಚಿಕೊಂಡು 78 ವರ್ಷದವರೆಗೂ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ಜು.26ರಂದು ನಾನು ಅಧಿಕಾರಕ್ಕೆ ಬಂದು 2 ವರ್ಷ ಆಗಲಿದೆ. ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ, ಜುಲೈ 25ರಂದು ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಜುಲೈ 26ರಿಂದ ನನ್ನ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ಬಿಜೆಪಿಯ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು.‌ ರಾಜ್ಯದ ವಿವಿಧ ಮಠಾಧೀಶರು ನನ್ನ ಬಗ್ಗೆ ತೋರಿಸಿದ ವಿಶೇಷ ಕಾಳಜಿಗೆ ಧನ್ಯವಾದಗಳು ಎಂದು ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss