ಕಾರ್ಖಾನೆಯಲ್ಲಿ ಗೋಡೆ ಕುಸಿತ: 7 ಮಂದಿ ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ (Gujarat) ಮೆಹ್ಸಾನಾ ಜಿಲ್ಲೆಯಲ್ಲಿ ಕಾರ್ಖಾನೆಯ ಟ್ಯಾಂಕ್‌ ಅಳವಡಿಕೆ ಕಾಮಗಾರಿ ವೇಳೆ ಗೋಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 37 ಕಿಮೀ ದೂರದಲ್ಲಿರುವ ಕಾಡಿ ಪಟ್ಟಣದ ಬಳಿ ಈ ಅವಘಡ ನಡೆದಿದೆ. ಮೃತ ಕಾರ್ಮಿಕರು ಕಾರ್ಖಾನೆಯೊಂದರ ಟ್ಯಾಂಕ್‌ಗಾಗಿ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ಗೋಡೆ ಕುಸಿದಿದೆ.

ಐವರು ಕಾರ್ಮಿಕರ ಶವಗಳನ್ನು ಹೊರ ತೆಗೆಯಲಾಗಿದೆ. ಮೂರರಿಂದ ನಾಲ್ಕು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ (Police) ಇನ್ಸ್‌ಪೆಕ್ಟರ್ ಪ್ರಹ್ಲಾದಸಿಂಗ್ ವಘೇಲಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!