ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿತ: 10 ಮಂದಿ ಕಾರ್ಮಿಕರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಲಕ್ನೋ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಗೋಡೆ ದಿಢೀರ್ ಕುಸಿದಿದ್ದು, ಹತ್ತು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ದಿಲ್‌ಶುಕ್ ಪ್ರದೇಶದಲ್ಲಿ ಕಟ್ಟಡ ಬಿದ್ದಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಕಟ್ಟಡದ ಅವಶೇಷಗಳಡಿ ಇನ್ನೂ ಜನರು ಸಿಲುಕಿರುವ ಸಾಧ್ಯತೆ ಇದ್ದು, ಅವರ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಘಟನೆಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೇಸರ ವ್ಯಕ್ತಪಡಿಸಿದ್ದು, ಅಗತ್ಯ ಸೌಲಭ್ಯಕ್ಕೆ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!