ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದು, ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. ಸಾವು-ನೋವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಮುಂಬೈನಲ್ಲಿ ವರುಣನ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಪ್ರವಾಹ ಭೀತಿ ಎದರಾಗಿದ್ದು, ಮನೆಯಿಂದ ಹೊರಬಾರದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಚೆಂಬೂರಿನ ಭಾರತ್ ನಗರ ಪ್ರದೇಶದಲ್ಲಿ ಕಾಂಪೌಂಡ್ ಗೋಡೆ ಕುಸಿದು ಗುಡಿಸಲುಗಳು ಮೇಲೆ ಬಿದಿದ್ದು, ಈ ವೇಳೆ ಅಲ್ಲಿದ್ದ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ ವಿಕ್ರೋಲಿಯಲ್ಲಿ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ.