ಊಟದಲ್ಲಿ ಈ ಎಲ್ಲಾ ಪದಾರ್ಥಗಳನ್ನು ಸೇರಿಸುತ್ತಾ ಹೋದರೆ ಕೆಟ್ಟ ಕೊಲೆಸ್ಟ್ರಾಲ್ ದೇಹದಿಂದ ಹೊರಹೋಗುತ್ತದೆ. ಯಾವೆಲ್ಲಾ ಪದಾರ್ಥ? ನೋಡಿ..
ಓಟ್ಸ್, ಧಾನ್ಯಗಳು, ಬೀಜಗಳು ಮತ್ತು ಬಾರ್ಲಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯನ್ನು ತಡೆಯಲು ಸಹಾಯ ಮಾಡುತ್ತದೆ. ಇವುಗಳಲ್ಲಿರುವ ಬೀಟಾ ಗ್ಲುಕನ್ ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ತೆಗೆದುಹಾಕುತ್ತದೆ.
ಪ್ರೋಟೀನ್ ಮತ್ತು ಫೈಬರ್‌ನಿಂದ ಸಮೃದ್ಧವಾಗಿರುವ ಬೀನ್ಸ್, ಬಟಾಣಿ ಮತ್ತು ರಾಜ್ಮಾದಿಂದ ತಯಾರಿಸಿದ ಭಕ್ಷ್ಯಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಇವು ಹೃದಯ ಕಾಯಿಲೆಗೆ ಕಾರಣವಾಗುವ ಕೊಲೆಸ್ಟ್ರಾಲ್ ಆಗಿ ಬದಲಾಗುವ ಕೆಟ್ಟ ಕೊಲೆಸ್ಟ್ರಾಲ್ನ್ನು ಕಡಿಮೆ ಮಾಡುತ್ತದೆ.
ಇದರಲ್ಲಿರುವ ಆಲಿಸಿನ್ ಎಂಬ ರಾಸಾಯನಿಕವು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯುತ್ತದೆ. ಇದು ದೇಹದಲ್ಲಿ ಅನಗತ್ಯವಾಗಿ ಸಂಗ್ರಹವಾಗುವ ಕೊಬ್ಬನ್ನು ಕರಗಿಸುತ್ತದೆ. ಇದರ ಪರಿಣಾಮವಾಗಿ ಹೃದಯ ಕಾಯಿಲೆಯನ್ನು ತಪ್ಪಿಸಬಹುದು. ಪ್ರತಿದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಅಗಿದು ತಿನ್ನುವುದರಿಂದ ಅನೇಕ ಆರೋಗ್ಯದ ಪ್ರಯೋಜನಗಳು ದೊರೆಯುತ್ತವೆ.
ಸೇಬು, ದ್ರಾಕ್ಷಿ, ಸ್ಟ್ರಾಬೆರಿ, ಆವಕಾಡೊ, ಕಿತ್ತಳೆ ಮತ್ತು ಸಿಹಿ ಗೆಣಸಿನಂತಹ ಸಿಟ್ರಸ್ ಹಣ್ಣುಗಳಲ್ಲಿ ಪೆಕ್ಟಿನ್ ಹೇರಳವಾಗಿದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಬೆಳಗಿನ ಉಪಾಹಾರದೊಂದಿಗೆ ಸೋಯಾ ಹಾಲು ಸೇವಿಸುವುದರಿಂದ ಈ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ