ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಗೆಬಗೆಯ ಮಾವಿನ ಹಣ್ಣುಗಳನ್ನು ಒಂದೇ ಸೂರಿನಡಿ ಸವಿಯೋ ಆಸೆ ಇದ್ಯಾ? ಲಾಲ್ ಬಾಗ್ ನಲ್ಲಿ ಈ ವರ್ಷ ಮಾವಿನ ಮೇಳ ನಡೆಸುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಮಾವಿನ ಮೇಳಕ್ಕೆ ಡೇಟ್ ಕೂಡ ಫಿಕ್ಸ್ ಮಾಡಿದ್ದಾರೆ.
ಇದೇ ಮೇ 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.
ಎಲ್ಲೆಲ್ಲಿಂದ ಬರಲಿದೆ ಮಾವು?
ಈ ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.
ಯಾವ್ಯಾವ ತಳಿ?
ಇನ್ನು ಐಐಎಚ್‌ಆರ್, ಜಿಕೆವಿಕೆ ಮತ್ತಿತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತೆ. ಈ ವರ್ಷದ ಮೇಳದಲ್ಲಿ ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ, ಸಕ್ಕರೆಗುತ್ತಿ ಸೇರಿದಂತೆ ನಾನಾ ತಳಿಯ ಹಣ್ಣುಗಳು ಇರಲಿವೆ.