ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಪಕ್ಷಗಳ ವಿರೋಧದ ನಡುವೆಯೂ ಲೋಕಸಭೆ ಹಾಗು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2025 ಅಂಗೀಕಾರವಾಗಿದ್ದು, ಇದೀಗ ಈ ನಡೆಯನ್ನು ಪ್ರಶ್ನಿಸಿ,ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಇದು ಮುಸ್ಲಿಮರ ಮೇಲಿನ ನೇರ ಹಲ್ಲೆ. ಅವರ ಆಸ್ತಿಗಳನ್ನು ಕಿತ್ತುಕೊಳ್ಳಲಿದೆ . ಪ್ರಧಾನಿ ನರೇಂದ್ರ ಮೋದಿ ಅವರು ವಕ್ಫ್ ಮಸೂದೆ ಮೂಲಕ ನಮ್ಮ ಎದೆಗೆ ಗುಂಡು ಹಾರಿಸುತ್ತಿದ್ದಾರೆ. ಮಸೀದಿ ದರ್ಗಾಗಳನ್ನು ಗುರಿಯಾಗಿಸುತ್ತಿದ್ದಾರೆ. ಮುಸ್ಲಿಮರಿಗೆ ಹಿಂದು, ಸಿಖ್, ಕ್ರಿಶ್ಚಿಯನ್ ಮತ್ತು ಆರ್‌ಎಸ್‌ಎಸ್ ಸಂವಿಧಾನ, ಅದರ ಸಿದ್ದಾಂತ, ಮೋದಿ, ಯೋಗಿ ನಿಜವಾದ ಶತ್ರುಗಳು ಎಂದು ಓವೈಸಿ ಟೀಕಿಸಿದ್ದಾರೆ.
ಮಸೂದೆ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು AIMIM ಮುಖ್ಯಸ್ಥ ಅಸದುದ್ದೀನ್ ಓವೈಸಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಮಸೂದೆಯು ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದ್ದಾರೆ.