ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಕಲ ತಯಾರಿ ಮಾಡಿಕೊಂಡಿದೆ. ಏಪ್ರಿಲ್ 2ಕ್ಕೆ ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಇದು ದೇಶದ ಮುಸ್ಲಿಂ ಸಮುದಾಯದಲ್ಲಿ ಪ್ರತಿಭಟನೆಗೆ ಕಾರಣವಾಗಿದೆ.
ವಕ್ಫ್ ಆಸ್ತಿಗಳ ಆಡಳಿತ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲಿದೆ ಎಂದು ಸರ್ಕಾರ ಹೇಳಿದೆ. ಆದರೂ, ಇದು ಮುಸ್ಲಿಮರ ಧಾರ್ಮಿಕ ಸ್ವಾತಂತ್ರ‍್ಯ ಮತ್ತು ಆಸ್ತಿ ಹಕ್ಕುಗಳ ಮೇಲೆ ದಾಳಿ ಎಂದು ವಿರೋಧ ಪಕ್ಷಗಳು ಮತ್ತು ಮುಸ್ಲಿಂ ನಾಯಕರು ಆರೋಪಿಸಿದ್ದಾರೆ.
ಇಂದು ಕರ್ನಾಟಕ, ದೆಹಲಿ, ಉತ್ತರ ಪ್ರದೇಶ, ಸೇರಿದಂತೆ ಹಲವು ರಾಜ್ಯಗಳಲ್ಲಿ ಮಸೀದಿಗಳಲ್ಲಿ ಜನರು ಕಪ್ಪು ಬಟ್ಟೆ ಧರಿಸಿ ಪ್ರಾರ್ಥನೆ ಸಲ್ಲಿಸಿದರು. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಈ ಬಿಲ್ ಅಸಂವಿಧಾನಿಕವಾಗಿದ್ದು, ಮುಸ್ಲಿಮರ ಧಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ್ದಾರೆ.