ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಲೋಕಸಭೆಯಲ್ಲಿ ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದ್ದು, ಹೀಗಾಗಿ ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ್ದು, ಏಪ್ರಿಲ್ 2 ರಂದು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಮತ್ತು ಸರ್ಕಾರದ ಪರವಾಗಿ ಮತ ಚಲಾಯಿಸಬೇಕು ಎಂದು ಸೂಚಿಸಿದೆ.
ಈಗಾಗಲೇ ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಬೆಂಬಲಿಸಿದ್ದು, ನಿತೀಶ್ ಕುಮಾರ್ ಅವರ ಜೆಡಿಯು ಕೂಡ ವಕ್ಫ್ ಮಸೂದೆಯನ್ನು ಬೆಂಬಲಿಸಲಿದೆ.