ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ತಮಿಳು ಸೂಪರ್‌ಸ್ಟಾರ್ ಹಾಗೂ ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ನಟ ವಿಜಯ್ ಅವರ ಅರ್ಜಿಯು ಏಪ್ರಿಲ್ 16 ರಂದು ವಿಚಾರಣೆಗೆ ಬರಲಿದ್ದು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.
ಇದೇ ಸಂದರ್ಭದಲ್ಲಿ ನ್ಯಾಯಾಲಯವು ವಕ್ಫ್ ಕಾಯ್ದೆಗೆ ಸಂಬಂಧಿಸಿದ ಇತರ ಅರ್ಜಿಗಳನ್ನು ಕೂಡ ವಿಚಾರಣೆ ನಡೆಸಲಿದೆ.