ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮುಷಿರಾಬಾದ್ ಜಿಲ್ಲೆಯಲ್ಲಿ ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದಿದೆ.
ಈ ಘಟನೆ ಜಿಲ್ಲೆಯ ಜಫ್ರಾಬಾದ್‌ನ ಶಂಷೇರ್‌ಗಂಜ್ ಪ್ರದೇಶದಲ್ಲಿ ನಡೆದಿದ್ದು, ಹಿಂಸಾಚಾರದಲ್ಲಿ ತಂದೆ ಹಾಗೂ ಮಗನನ್ನು ಇರಿದು ಕೊಲ್ಲಲಾಗಿದೆ. ಇಲ್ಲಿಯವರೆಗೆ 110 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ಅನೇಕ ಸ್ಥಳಗಳಲ್ಲಿ ಪೊಲೀಸ್ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಇದೇ ಊರಿನ ಧುಲಿಯನ್ ಎಂಬಲ್ಲಿ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.