ವಕ್ಫ್ ಮಸೂದೆ ಗದ್ದಲ: ಮೋದಿ ಸರ್ಕಾರದ ವಿರುದ್ಧ ಸಮರ ಸಾರಲು ಮುಂದಾದ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಮಸೂದೆ ಮಂಡಿಸಿದ ನಂತರ ವಿರೋಧ ಪಕ್ಷಗಳು ಮೋದಿ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಸುಪ್ರೀಂ ಕೋರ್ಟ್​​​​ ಮೆಟ್ಟಿಲೇರಿದೆ.

ಕಾಂಗ್ರೆಸ್ ಕೇಂದ್ರದ ಈ ನಿರ್ಧಾರದ ವಿರುದ್ಧ​​​​ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಿದೆ. ವಕ್ಫ್ (ತಿದ್ದುಪಡಿ) ಮಸೂದೆ ಬಗ್ಗೆ ನಾವು ಸುಪ್ರೀಂ ಕೋರ್ಟ್​​​ನಲ್ಲಿ ಪ್ರಶ್ನಿಸಿಲಿದ್ದೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೊಂಡಿದ್ದಾರೆ.

ಭಾರತದ ಸಂವಿಧಾನದಲ್ಲಿರುವ ತತ್ವಗಳು, ನಿಬಂಧನೆಗಳು ಮತ್ತು ಅಭ್ಯಾಸಗಳ ಮೇಲೆ ಮೋದಿ ಸರ್ಕಾರ ದಾಳಿ ಮಾಡುತ್ತಿದೆ. ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!