ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಪಕ್ಷಗಳ ತೀವ್ರ ಗದ್ದಲ ಹಾಗೂ ವಿರೋಧದ ನಡುವೆಯೂ ಬುಧವಾರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ಮಂಡಿಸಿದ್ದಾರೆ.
ಲೋಕಸಭೆಯಲ್ಲಿ ವಕ್ಫ್(ತಿದ್ದುಪಡಿ) ಮಸೂದೆ ಮಂಡಿಸಿ ಮಾತನಾಡಿದ ಕಿರಣ್ ರಿಜಿಜು ಅವರು, ವಕ್ಫ್ ಮಸೂದೆಯನ್ನು ಏಕೀಕೃತ ವಕ್ಫ್ ನಿರ್ವಹಣಾ ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ(UMEED) ಮಸೂದೆ ಎಂದು ಮರುನಾಮಕರಣ ಮಾಡಲಾಗುವುದು ಎಂದರು.
ಈ ಮಸೂದೆಯು ವಕ್ಫ್ ಆಸ್ತಿಗಳ ಆಡಳಿತವನ್ನು ಸುಧಾರಿಸಲು, ತಂತ್ರಜ್ಞಾನ ಆಧಾರಿತ ನಿರ್ವಹಣೆಯನ್ನು ಪರಿಚಯಿಸಲು, ಸಂಕೀರ್ಣತೆಗಳನ್ನು ಪರಿಹರಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತದೆ. ಜಂಟಿ ಸಂಸದೀಯ ಸಮಿತಿಯ ನಡೆಸಿದ ಸಮಾಲೋಚನಾ ಪ್ರಕ್ರಿಯೆಯು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿಯೇ ಅತಿದೊಡ್ಡ ಪ್ರಕ್ರಿಯೆಯಾಗಿದೆ ಎಂದರು.