ವಕ್ಫ್ ಬೋರ್ಡ್ ತಿದ್ದುಪಡಿ: ಕೇಂದ್ರದ ನಿಲುವಿಗೆ ಕಾಂಗ್ರೆಸ್ ವಿರೋಧ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್;

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕ್ರಮವನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಹಾಗೂ ಎನ್‌ಡಿಎಯವರಿಗೆ ಅಲ್ಪಸಂಖ್ಯಾತರ ಮೇಲೆ ಕೋಪವಿರುವಂತಿದೆ. ಬಿಜೆಪಿಯವರು ಎಂದಿಗೂ ಜಾತ್ಯತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಬಿಜೆಪಿ ಮೊದಲಿನಿಂದಲೂ ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡಿದ್ದು, ಜಾತ್ಯತೀತ ತತ್ವವನ್ನು ನಂಬುವುದಿಲ್ಲ. ಮತಾಂತರ ನಿಷೇಧ ಕಾನೂನು, ಗೋಹತ್ಯೆ ತಿದ್ದುಪಡಿಗಳನ್ನು ಜಾರಿಗೆ ತಂದ ಬಿಜೆಪಿಯವರು ಇಂದು ವಕ್ಫ್‌ ಬೋರ್ಡ್ ತಿದ್ದುಪಡಿ ಪ್ರಯತ್ನಕ್ಕೂ ಕೈಹಾಕಿದ್ದಾರೆ. ವಕ್ಫ್ ಬೋರ್ಡ್ ಕಾನೂನು ಆ ಸಮುದಾಯದ ವೈಯಕ್ತಿಕ ಕಾನೂನಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ. ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟ, ಕೇಂದ್ರದ ಈ ನಿಲುವನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!