ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತರಿಗೆ ನೀಡಿರುವ ವಕ್ಫ್ ನೋಟಿಸ್ ಹಿಂಪಡೆಯುವಂತೆ ಸಿದ್ದರಾಮಯ್ಯ ಜಿಲ್ಲಾಧಿಕಾರಿಗೆ ಸೂಚಿಸಿರುವ ಬೆನ್ನಲ್ಲೇ ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾನೂನು ಹೋರಾಟಕ್ಕೆ ಸಜ್ಜಾಗಿದೆ.
ವಕ್ಫ್ ನೋಂದಣಿ ವಿರುದ್ಧ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮುಂದಾಗಿದ್ದಾರೆ. ವರದಿ ಹಿಂಪಡೆದರೆ ಸಾಲದು ಪಹಣಿಯಲ್ಲಿನ ನೋಂದಣಿಯೂ ತಿದ್ದುಪಡಿ ಆಗಬೇಕು ಎಂದು ಆಗ್ರಹಿಸಿದರು.
ತೇಜಸ್ವಿ ಸೂರ್ಯ ಸೋಮವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ. ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ತೇಜಸ್ವಿ ಸೂರ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.