ವಕ್ಫ್ ವಿವಾದ: ಹಾವೇರಿ ಜಿಲ್ಲೆಯಲ್ಲಿ ಕಲ್ಲು ತೂರಾಟ, 15 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ವಕ್ಫ್ ಆಸ್ತಿಗಳ ಒತ್ತುವರಿ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಡಕೋಳ ಗ್ರಾಮದಲ್ಲಿ ಕೂಡ ವಕ್ಫ್ ಮಂಡಳಿಯಿಂದ ತಮ್ಮ ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರ ಗುಂಪೊಂದು ಮುಸ್ಲಿಂ ಮುಖಂಡರ ನಿವಾಸಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರೊಂದಿಗೆ ವಕ್ಫ್ ವಿವಾದ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಕಡಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ಮುಖಂಡ ಮೊಹಮ್ಮದ್ ರಫಿ ಅವರ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೈಕ್ ಹಾನಿಗೊಳಿಸಿದೆ.

ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್, ಎಸ್ಪಿ ಅಂಶುಕುಮಾರ್ ಶ್ರೀವಾಸ್ತವ ಮತ್ತಿತರರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕಲ್ಲು ತೂರಾಟ ನಡೆಸಿದವರನ್ನು ಪೊಲೀಸರು ಗುರುತಿಸಿ ಬಂಧಿಸಿದ್ದು, ಗ್ರಾಮಸ್ಥರೊಂದಿಗೆ ಮಾತನಾಡಿದ್ದಾರೆ ಮತ್ತು ಜನರನ್ನು ಪ್ರಚೋದಿಸುವವರನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಲು ಯಾರೂ ಮುಂದೆ ಬರುತ್ತಿಲ್ಲ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 15 ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೆಎಸ್ ಆರ್ ಪಿ ನಾಲ್ಕು ತುಕಡಿಗಳು ಮತ್ತು 200 ಕ್ಕೂ ಹೆಚ್ಚು ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!