ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಜಿಲ್ಲೆಯ 43 ಪ್ರವಾಸಿ ತಾಣಗಳು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಇತ್ತೀಚೆಗಷ್ಟೇ ನೂರಾರು ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ಭೂಮಿ ವಕ್ಫ್ ಆಸ್ತಿ ಎಂದು ಮಂಡಳಿ ಹೊನವಾಡ ಗ್ರಾಮದ 15 ರೈತರಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿತ್ತು.
ಇದಾದ ಬಳಿಕ ರಾಜಕೀಯ ಮಾತುಗಳು ಜೋರಾಗಿ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ವಿಜಯಪುರದಲ್ಲಿ ಪ್ರವಾಸಿ ತಾಣಗಳಿಗೆ ನೋಟಿಸ್ ನೀಡಿರುವುದು ಬೆಳಕಿಗೆ ಬಂದಿದೆ.
ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್ ನೋಟಿಸ್ ನೀಡಿದ್ದು, ಇದಕ್ಕೆ ಸಂಸದ ರಮೇಶ್ ಜಿಗಜಿಣಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಪ್ರವಾಸಿ ತಾಣಗಳು, ಸ್ಮಾರಕಗಳಿಗೆ ನೀಡಿರುವ ವಕ್ಫ್ ನೋಟಿಸ್‌ಗಳನ್ನು ಹಿಂಪಡೆಯುವಂತೆ ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.