ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ಅಧಿಸೂಚನೆ ಅನ್ನೋದೇ ಕಾನೂನು ಬಾಹಿರ ಎಂದು ಮಾಜಿ ಸಚಿವ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ವಕ್ಫ್ ಮಾಲೀಕತ್ವ ವಿವಾದದ ಕುರಿತು ಪ್ರತಿಕ್ರಿಯಿಸಿದರು. ಜಿಲ್ಲೆಯ ಡಿ.ಆರ್ ಪೊಲೀಸ್ ಗ್ರೌಂಡ್, ರತ್ನಗಿರಿಯ ಜಾಗವನ್ನು ವಕ್ಫ್ ಆಸ್ತಿ ಎಂದು ನೋಟಿಫಿಕೇಶನ್ ಹೊರಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಳ್ಳಿಯಿಂದ ಹಳ್ಳಿಗೆ ಹೋಗಿ ವಕ್ಫ್ ಅದಾಲತ್ ರಚಿಸಿದವರು ಯಾರು? ಬಿಜೆಪಿಯೋ ಅಥವಾ ಜಮೀರ್ ಅವರೋ? ಸಿಎಂ ಆದೇಶದ ಮೇರೆಗೆ ನಾನು ವಕ್ಫ್ ಅದಾಲತ್ ಮಾಡಿದ್ದೇನೆ ಎಂದು ಜಮೀರ್ ಹೇಳಿದ್ದಾರೆ. ಜಮೀರ್ ಮಾತನಾಡಿದ್ದ ವೀಡಿಯೋ ತೋರಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.