BSY ಕುಟುಂಬದ ವಿರುದ್ಧ ಸಮರ: ಹೊಸ ಪಕ್ಷದ ಸ್ಥಾಪನೆ ಬಗ್ಗೆ ಸುಳಿವು ಕೊಟ್ರಾ ಯತ್ನಾಳ್‌?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಕ್ಷದಿಂದ ಉಚ್ಛಾಟನೆಯಾದ ಬಳಿಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿ.ಎಸ್‌ ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರಿದ್ದಾರೆ, ಇದೀಗ ಹೊಸ ಪಕ್ಷದ ಸ್ಥಾಪನೆ ಮಾಡುವುದಾಗಿ ಸವಾಲ್ ಹಾಕಿದ್ದಾರೆ.

ವಿಜಯಪುರಕ್ಕೆ ಆಗಮಿಸಿದ್ದ ಯತ್ನಾಳ್ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಹಿಂದೂಗಳ ರಕ್ಷಣೆಗೆ ಹೊಸ ಪಕ್ಷ ಕಟ್ಟುವ ಅನಿವಾರ್ಯತೆ ಬಂದಿದೆ ಎಂದು ಹೇಳಿದ್ದಾರೆ. ಹೊಸ ಪಕ್ಷದ ಬಗ್ಗೆ ನಾವು ಜನಾಭಿಪ್ರಾಯ ಸಂಗ್ರಹಿಸುತ್ತೇವೆ. ಒಂದು ವೇಳೆ ಹೊಸ ಪಕ್ಷದ ಪರವಾಗಿ ಅಭಿಪ್ರಾಯ ಬಂದ್ರೆ ಖಂಡಿತ ನಾವು ಹೊಸ ಪಕ್ಷವನ್ನ ವಿಜಯದಶಮಿ ವೇಳೆಗೆ ರಚನೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!