ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ.
ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರಿಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ.
ಡ್ರಗ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ: ಪರಮೇಶ್ವರ

