ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಧಾರ್ಮಿಕ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಅಮೆರಿಕ–ಇರಾನ್ ಜಂಟಿ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದರೆಂಬ ವರದಿಗಳ ನಡುವೆಯೇ, ಇರಾನ್ ಪಡೆಗಳು ಪ್ರತೀಕಾರದ ಹೆಸರಿನಲ್ಲಿ ಕೊಲ್ಲಿ ರಾಷ್ಟ್ರಗಳತ್ತ ದಾಳಿ ಆರಂಭಿಸಿವೆ.
ಅಮೆರಿಕ ಸೇನಾ ನೆಲೆಗಳು ಇರುವ ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್ ಹಾಗೂ ಬಹ್ರೇನ್ ದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲೆ 200ಕ್ಕೂ ಅಧಿಕ ಡ್ರೋನ್‌ಗಳು ಮತ್ತು ನೂರಕ್ಕೂ ಹೆಚ್ಚು ಕ್ಷಿಪಣಿಗಳು ಉಡಾಯಿಸಲ್ಪಟ್ಟಿವೆ ಎಂದು ಅಲ್ಲಿನ ರಕ್ಷಣಾ ಇಲಾಖೆ ತಿಳಿಸಿದೆ.
ಇದನ್ನೂ ಓದಿ:
ಕತಾರ್ ಮತ್ತು ಬಹ್ರೇನ್ ಮೇಲೂ ಹಲವು ಡ್ರೋನ್ ಹಾಗೂ ಕ್ಷಿಪಣಿಗಳು ಪ್ರಯೋಗಗೊಂಡಿವೆ. ಯುಎಇ ರಕ್ಷಣಾ ಸಚಿವರು ಪ್ರತಿಕ್ರಿಯೆ ನೀಡಿದ್ದು, ಬಹುತೇಕ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ವಾಯು ರಕ್ಷಣಾ ವ್ಯವಸ್ಥೆ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ. ಕೆಲವೇ ದಾಳಿಗಳು ಮಾತ್ರ ನೆಲದ ಮೇಲೆ ಬಿದ್ದಿದ್ದು, ಸೀಮಿತ ಹಾನಿ ಸಂಭವಿಸಿದೆ ಎನ್ನಲಾಗಿದೆ.
ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ಮುಂದಿನ ಪರಿಸ್ಥಿತಿಯನ್ನು ಕಟ್ಟುನಿಟ್ಟಾಗಿ ಗಮನಿಸಲಾಗುತ್ತಿದೆ. ಖಮೇನಿ ಹತ್ಯೆಯ ಪರಿಣಾಮವಾಗಿ ಪಶ್ಚಿಮ ಏಷ್ಯಾದ ರಾಜಕೀಯ ಮತ್ತು ಭದ್ರತಾ ಸ್ಥಿತಿ ಇನ್ನಷ್ಟು ಅಸ್ಥಿರವಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.



