September 13, 2026
Sunday, September 13, 2026
spot_img

ಯುದ್ಧದ ಎಫೆಕ್ಟ್‌: ಸದ್ದಿಲ್ಲದೆ ರೇಟ್ ಜಾಸ್ತಿ ಮಾಡ್ಕೊಂಡ ಅಡುಗೆ ಎಣ್ಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್–ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ಈಗ ಮಾರುಕಟ್ಟೆ ಮೇಲೆ ಸ್ಪಷ್ಟವಾಗಿ ಕಾಣಿಸತೊಡಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಮಾರುಕಟ್ಟೆಯಲ್ಲಿ ಉಂಟಾದ ಅಸ್ಥಿರತೆಯ ನಡುವೆ ರಾಜ್ಯದಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.

ಕಳೆದ ವಾರದೊಂದಿಗೆ ಹೋಲಿಸಿದರೆ ಈ ವಾರ ಪ್ರತಿ ಲೀಟರ್ ಅಡುಗೆ ಎಣ್ಣೆಯ ಬೆಲೆಯಲ್ಲಿ ಸುಮಾರು 4 ರಿಂದ 5 ರೂಪಾಯಿವರೆಗೆ ಹೆಚ್ಚಳವಾಗಿದೆ. ಯುದ್ಧ ಪರಿಸ್ಥಿತಿ ಇದೇ ರೀತಿಯಲ್ಲಿ ಮುಂದುವರೆದರೆ ಮುಂದಿನ ವಾರದಲ್ಲಿ ಲೀಟರ್‌ಗೆ 10 ರಿಂದ 15 ರೂಪಾಯಿವರೆಗೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಮಾರುಕಟ್ಟೆಯ ಪ್ರಮುಖ ಬ್ರ್ಯಾಂಡ್‌ಗಳ ಬೆಲೆಗಳಲ್ಲೂ ಏರಿಕೆ ಕಂಡುಬಂದಿದೆ. ಇದರ ಮಧ್ಯೆ ದಾಸ್ತಾನು ಸಾಕಷ್ಟು ಇದ್ದರೂ ಯುದ್ಧದ ನೆಪ ಹೇಳಿ ಕೆಲ ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸಿ ಬೆಲೆ ಹೆಚ್ಚಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮಾರುಕಟ್ಟೆಯಲ್ಲಿ ಇನ್ನೂ ಒಂದು ತಿಂಗಳಿಗೆ ಸಾಕಾಗುವಷ್ಟು ಸಂಗ್ರಹವಿದ್ದರೂ ಬೆಲೆ ಏರಿಕೆಯಾಗಿರುವುದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳು ಮಾರುಕಟ್ಟೆಯ ಮೇಲೆ ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬರುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !