March 4, 2026
Wednesday, March 4, 2026
spot_img

ಮಧ್ಯಪ್ರಾಚ್ಯದಲ್ಲಿ ಯುದ್ಧ ಕಾರ್ಮೋಡ: ದುಬೈನಲ್ಲಿ ನಾನು ಸೇಫ್ ಆಗಿದ್ದೇನೆ ಎಂದ ಹನಿ ಸಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದು, ಇದರ ನಡುವೆ ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ ಎಂದು ಯೋ ಯೋ ಹನಿ ಸಿಂಗ್ ತಿಳಿಸಿದ್ದಾರೆ.

ಇರಾನ್ ಅಮರಿಕದ ವಾಯು ನೆಲೆಯನ್ನು ಗುರಿಯಾಗಿಸಿಕೊಂಡು ಅಬುಧಾಬಿ, ದುಬೈ, ಕತಾರ್ ಮತ್ತು ಕುವೈತ್‌ ನ ಮೇಲೆ ದಾಳಿ ನಡೆಸುತ್ತಿದ್ದು, ಇದರಿಂದ ಭಯದ ವಾತಾವರಣ ಹೆಚ್ಚಾಗುತ್ತಿದೆ.

ಈ ನಡುವೆ ಹನಿ ಸಿಂಗ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿರುವ ವಿಡಿಯೋ ಜೊತೆಗೆ ತಾವು ಸೇಫ್ ಇರುವುದಾಗಿ ತಿಳಿಸಿದ್ದಾರೆ. ದುಬೈ ನಗರ ಸುರಕ್ಷಿತವಾಗಿ, ಶಾಂತವಾಗಿದೆ. ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಾನು ಸೇಫ್ ಆಗಿದ್ದೀನಿ ಎಂದು ಬರೆದುಕೊಂಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಅನೇಕರನ್ನು ಕಳವಳಕ್ಕೆ ದೂಡಿದೆ. ಹಲವಾರು ಸೆಲೆಬ್ರಿಟಿಗಳು ಮಧ್ಯಪ್ರಾಚ್ಯ ಮತ್ತು ಯುಎಇಯಲ್ಲಿ ಸಿಲುಕಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !