ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಪಾಕಿಸ್ತಾನ ಮಿಲಿಟರಿ ಸಂಘರ್ಷಗಳ ಬಳಿಕ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಯಾವುದೇ ಸಮಸ್ಯೆಗೆ ಯುದ್ಧ ಪರಿಹಾರವಲ್ಲ, ದೇಶಗಳು ಸಂವಾದ ಮತ್ತು ರಾಜತಾಂತ್ರಿಕ ವಿಧಾನಗಳ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದೆ.
ಭಾರತ-ಪಾಕಿಸ್ತಾನ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಮಂಡಳಿ ಕಳವಳ ವ್ಯಕ್ತಪಡಿಸಿದೆ. ಭಯೋತ್ಪಾದನೆ ಮತ್ತು ಮುಗ್ಧ ನಾಗರಿಕರ ಹತ್ಯೆ ತೀವ್ರ ಕಳವಳಕಾರಿ ವಿಷಯ ಎಂದು ಹೇಳಿದ AIMPLB, ಇಸ್ಲಾಮಿಕ್ ಬೋಧನೆಗಳು, ಜಾಗತಿಕವಾಗಿ ಗುರುತಿಸಲ್ಪಟ್ಟ ತತ್ವಗಳು ಮತ್ತು ಮಾನವೀಯ ಮೌಲ್ಯಗಳಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ಮುಂದಿನ ಒಂದು ವಾರಕ್ಕೆ ಮುಂದೂಡಲಾಗುತ್ತಿದೆ ಎಂದು ಗುರುವಾರ ನಡೆದ ಪದಾಧಿಕಾರಿಗಳ ವಿಶೇಷ ಆನ್‌ಲೈನ್ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ AIMPLB ಈ ಪ್ರತಿಪಾದನೆಗಳನ್ನು ಮಾಡಿದೆ.
ನದಿ ಈಜಿ ದಾಟೋದಕ್ಕೆ ದೋಣಿಯನ್ನು ಅಪ್ಪಣೆ ಯಾಕೆ