March 1, 2026
Sunday, March 1, 2026
spot_img

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ವಿದೇಶದಲ್ಲಿ ಸಿಲುಕಿದ ಬಳ್ಳಾರಿ ಮಂದಿಗೆ ಜಿಲ್ಲಾಡಳಿತದ ಆಸರೆ

ಹೊಸದಿಗಂತ ಬಳ್ಳಾರಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನದಲ್ಲಿ ಭಾರಿ ಏರುಪೇರಾಗಿದೆ. ಇರಾನ್, ಇಸ್ರೇಲ್, ಸೌದಿ ಅರೇಬಿಯಾ ಸೇರಿದಂತೆ 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ.

ಈ ಹಿನ್ನೆಲೆಯಲ್ಲಿ, ದುಬೈ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಸಿಲುಕಿರುವ ಜಿಲ್ಲೆಯ ನಿವಾಸಿಗಳ ನೆರವಿಗಾಗಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಈ ಕೆಳಗಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

ನಿಮ್ಮ ಕುಟುಂಬದವರು ಅಥವಾ ಸ್ನೇಹಿತರು ವಿದೇಶದಲ್ಲಿ ಸಿಲುಕಿಕೊಂಡಿದ್ದರೆ ತಕ್ಷಣ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:

ಬಳ್ಳಾರಿ ಜಿಲ್ಲಾ ತುರ್ತು ಕೇಂದ್ರ: 08392-277100

ಜಿಲ್ಲಾ ಟೋಲ್ ಫ್ರೀ ಸಂಖ್ಯೆ: 1077

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ: 080-22340676, 080-22253707

ರಾಜ್ಯ ಟೋಲ್ ಫ್ರೀ ಸಂಖ್ಯೆ: 1070

ವಿದೇಶದಲ್ಲಿರುವ ಕನ್ನಡಿಗರು ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಸಂಕಷ್ಟದಲ್ಲಿರುವವರು ಕೂಡಲೇ ಈ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಿ ಅಥವಾ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ.

ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು ಮುಖ್ಯಮಂತ್ರಿಗಳ ನಿರ್ದೇಶನದಂತೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾಡಳಿತವು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !