Sunday, September 25, 2022

Latest Posts

ವಾರಾಹಿ ಜಲಾಶಯದ ನೀರಿನ ಮಟ್ಟ ಏರಿಕೆ: ನದಿ ಪಾತ್ರದ ಜನರು ಎಚ್ಚರ ವಹಿಸಲು ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಾರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ. ಇದ್ದು, ಈಗಾಗಲೇ ಜಲಾಶಯದ ಮಟ್ಟವು 590.10 ಮೀ. ತಲುಪಿದೆ. ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದಲ್ಲಿ ಅಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.

ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ ಹಾಲಾಡಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!