ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್ಬಾಯ್ನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಕ್ಟೋಬರ್ 31ರಂದು ಯಲ್ಲಾಲಿಂಗ ಎಂಬಾತನನ್ನು ಬಂಧಿಸಲಾಗಿದ್ದು, ಆತ ಕಲಬುರಗಿ ಮೂಲದವನು ಎನ್ನುವ ಮಾಹಿತಿ ಲಭ್ಯವಾಗಿದೆ. ತಿಲಕನಗರದ ಆಸ್ಪತ್ರೆಯಲ್ಲಿ ವಾರ್ಡ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.
ಪೊಲೀಸ್ ಅಧಿಕಾರಿ ನೀಡಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 31 ರಂದು ಬೆಳಗ್ಗೆ 8.20ರ ಸುಮಾರಿಗೆ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ವಾಶ್ರೂಂನ ಕಿಟಕಿಯ ಮೇಲೆ ಮೊಬೈಲ್ ಇರುವುದನ್ನು ಕಂಡರು. ಅದನ್ನು ಅನ್ಲಾಕ್ ಮಾಡಿದ ಬಳಿಕ ಹಲವು ರೆಕಾರ್ಡಿಂಗ್ಸ್ಗಳನ್ನು ನೋಡಿ ಗಾಬರಿಗೊಂಡಿದ್ದರು.
ಅವಳು ಹೊರಗೆ ಬಂದಾಗ ಯಲ್ಲಾಲಿಂಗ ಆ ಫೋನ್ ನನ್ನದು ನನಗೆ ವಾಪಸ್ ಕೊಡು ಎಂದು ಕೇಳಿದ್ದಾನೆ, ಆದರೆ ಸಿಬ್ಬಂದಿ ನಿರಾಕರಿಸಿದಾಗ ಆಕೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.