ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯವರಿಗೆ ಹಿಂದೂ-ಮುಸ್ಲಿಂ ಅನ್ನೋ ವಿಚಾರ ಬಿಟ್ರೆ ಇನ್ನೇನಿದೆ? ಪಹಲ್ಗಾಮ್ ಆಗಿ ಎಷ್ಟು ದಿನ ಆಗಿದೆ? ಈ ಮಧ್ಯೆ ಇಂಡಿಯಾ ಪಾಕಿಸ್ತಾನ ಮ್ಯಾಚ್ ಯಾಕೆ ಬೇಕಾಗಿತ್ತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೇಂದ್ರ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾದವರು ಬೇಡ, ಸಿಂಧೂ ನದಿ ನೀರು ಕೊಡಲ್ಲ ಅಂತಾರೆ, ಕ್ರಿಕೆಟ್ ಮಾತ್ರ ಆಡಿಸುತ್ತಾರೆ. ಪಾಕಿಸ್ತಾನದ ಜೊತೆಗೆ ಇಂಡಿಯಾ ಕ್ರಿಕೆಟ್ ಆಡಬಹುದಾ ಎಂದು ಪ್ರಶ್ನಿಸಿದರು.
ಇನ್ನೂ ಮೋದಿ ಗ್ರೇಟೆಸ್ಟ್ ಪ್ರೈಮ್ ಮಿನಿಸ್ಟರ್ ಎಂದು ಸಾಬೀತು ಮಾಡಲು ಹೊರಟಿದ್ದಾರೆ. ಬಿಜೆಪಿಯ ಪಿಎಂ ಮೋದಿ, ಅಡ್ವಾನಿ, ವಾಜಪೇಯಿ ಪಾಕಿಸ್ತಾನಕ್ಕೆ ಹೋಗಿದ್ದು, ಅಲ್ಲದೇ ಪಾಕಿಸ್ತಾನಕ್ಕೆ ಬಸ್ ಬಿಟ್ಟಿದ್ದು ಅವರೆ. ಹಾಗಾಗಿ ಎಲ್ಲವೂ ಮಾಡಿದ್ದು ಬಿಜೆಪಿಯವರೆ ಎಂದು ಕಿಡಿಕಾರಿದರು.