March 16, 2026
Monday, March 16, 2026
spot_img

ಸಿಪ್ಪೆ ಹಾಕಬೇಡಿ ಅಂದಿದ್ದೇ ತಪ್ಪಾ? ಕೆಎಸ್ಆರ್‌ಟಿಸಿ ಬಸ್‌ನಲ್ಲೇ ನಡೆಯಿತು ‘ಕಡಲೆಕಾಯಿ’ ಯುದ್ಧ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಸ್ಸಿನೊಳಗೆ ಕಡಲೆಕಾಯಿ ಸಿಪ್ಪೆ ಹಾಕಬೇಡಿ ಎಂದಿದ್ದಕ್ಕೆ ನಿರ್ವಾಹಕ ಹಾಗೂ ಪ್ರಯಾಣಿಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ.

ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್ ಎಂಬುವವರು ಕಡಲೆಕಾಯಿ ತಿಂದು ಸಿಪ್ಪೆಯನ್ನು ಬಸ್ಸಿನಲ್ಲೇ ಎಸೆದಿದ್ದಾರೆ. ಇದನ್ನು ಗಮನಿಸಿದ ನಿರ್ವಾಹಕ ಮುನಿಮಾದಯ್ಯ ಅವರು ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದು, ಗಲಾಟೆ ವಿಕೋಪಕ್ಕೆ ಹೋಗಿದೆ.

ಸರಗೂರು ಬೈಪಾಸ್ ಬಳಿ ತಲುಪುತ್ತಿದ್ದಂತೆ ಪ್ರಯಾಣಿಕರು ಹಾಗೂ ನಿರ್ವಾಹಕ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಈ ಜಗಳದಲ್ಲಿ ಮೂವರಿಗೂ ಗಾಯಗಳಾಗಿದ್ದು, ಪ್ರಸ್ತುತ ಕೊಳ್ಳೇಗಾಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !